
ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಸಿ ಹೇಳಿದ್ದು ಹೀಗೆ…. ವಿಡಿಯೋ ನೋಡಿ
Tuesday, November 23, 2021
ಮಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ
ಇಂದು ಮದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ಮಾಜಿ ಸಚಿವರುಗಳಾದ
ರಮನಾಥ ರೈ, ಯು ಟಿ ಖಾದರ್, ಅಭಯಚಂದ್ರ ಜೈನ್ ಮತ್ತು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರೊಂದಿಗೆ
ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್
ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿದ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್
ನೀಡಿದೆ. ಚುನಾವಣಾ ಪ್ರಚಾರದ ಬಗ್ಗೆ ಎರಡು ಜಿಲ್ಲೆಗಳ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು
ಎಂದರು . ಪ್ರಚಾರಕ್ಕೆ ನಾಯಕರು ಬರಲಿದ್ದಾರೆಯೆ ಎಂಬ
ಪ್ರಶ್ನೆಗೆ ಇಲ್ಲಿ ಮತದಾರರೆ ನಾಯಕರು ಎಂದು ಉತ್ತರಿಸಿದರು. (ವಿಡಿಯೋ ನೋಡಿ)