-->
ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನೀಗ ಪೊಲೀಸ್ ಅತಿಥಿ!

ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನೀಗ ಪೊಲೀಸ್ ಅತಿಥಿ!

ಚಿಕ್ಕಮಗಳೂರು: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು‌. ಕೊರೊನಾ ಬಳಿಕ ಈ ಕೃತ್ಯ ಇನ್ನಷ್ಟು ಹೆಚ್ಚಳವಾಗುತ್ತಿರುವುದು ವರದಿಯಾಗಿದೆ.

ಇದೀಗ 16ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವನು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.

ಬಾಳೂರು ಹಳ್ಳಿಕೇರೆ ಮೂಲದ ಸುದೀಪ್ (20) ಎಂಬಾತ ಅತ್ಯಾಚಾರ ಆರೋಪಿ.

ಈ ಬಗ್ಗೆ ಸಂತ್ರಸ್ತೆಯ ಮನೆಯವರು ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಾಳೂರು ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article