ಬಂಟ್ವಾಳದ ಶ್ರೀ ಕಾರಿಂಜೇಶ್ವರ ದೇವಾಲಯದೊಳಗೆ ಶೂಧರಿಸಿ ಪ್ರವೇಶಿಸಿ ಪ್ರಾವಿತ್ರ್ಯಕ್ಕೆ ಧಕ್ಕೆ ತಂದಿರುವ ಯುವಕರ ತಂಡ: ಕಠಿಣ ಕ್ರಮಕ್ಕೆ ಆಗ್ರಹ


ಬಂಟ್ವಾಳ: ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಾಲಯದೊಳಗೆ ಐವರು ಯುವಕರ ತಂಡ ಶೂ ಧರಿಸಿ ಪ್ರವೇಶಿಸಿ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಪೋಟೋ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಕಾರಿನಲ್ಲಿ ಮೋಜಿ ಮಸ್ತಿ ಮಾಡಲು ಬಂದಿದ್ದ ಐವರು ಯುವಕರ ಶ್ರೀ ಕಾರಿಂಜೇಶ್ವರ ದೇವಾಲಯದ ಒಳಗಡೆಯೇ ಶೂ ಧರಿಸಿ ಪ್ರವೇಶ ಮಾಡಿದ್ದರು. ಇದರ ಫೋಟೊ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬಂಟ್ವಾಳ ತಾಲೂಕು ಹಿಂದು ಜಾಗರಣ ವೇದಿಕೆ ಘಟನೆಯನ್ನು ಖಂಡಿಸಿದ್ದು, ಕಾನೂನು ಸಮರಕ್ಕೆ ಸಿದ್ಧವಾಗುವುದಾಗಿ ಸೂಚನೆ ನೀಡಿದೆ.

ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್  ನಾಯ್ಕ್ ಉಳಿಪ್ಪಾಡಿ ಗುತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಘಟನೆಯ ಬಗ್ಗೆ ತನಿಖೆಗೊಳಪಡಿಸಬೇಕು. ಸಮಾಜದಲ್ಲಿ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವಂತವರ ವಿರುದ್ಧ ಕಠಿಣ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 

BREAKING NEWS
Loading latest news...
Join our WhatsApp Channel Powered By : Online Pudu