SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗೆಳೆಯನ ತಂದೆಯೆ ಆರೋಪಿ


ಚಿಕ್ಕಮಗಳೂರು: ಎಸ್ ಎಸ್ ಎಲ್ ಸಿ ವಿದ್ತಾಭ್ಯಾಸ ಮಾಡುತ್ತಿರುವ ಅಪ್ರಾಪ್ತೆ ಮೇಲೆ  ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯನ್ನು ಅತ್ಯಾಚಾರ ಎಸಗಿದ  ಚಂದ್ರು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಮಗನ ಗೆಳತಿಯನ್ನೆ ಈತ ಅತ್ಯಾಚಾರವೆಸಗಿದ್ದಾನೆ.

  ಆರೋಪಿಯ ವಿರುದ್ಧ ಬಾಲಕಿಯ ತಾಯಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಚಂದ್ರುವನ್ನು ಬಂಧಿಸಿದ್ದಾರೆ.

 ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಗೆಳೆಯನನ್ನು ಹುಡುಕಿಕೊಂಡು ಆತನ ಮನೆಗೆ ಹೋಗಿದ್ದ ವೇಳೆ ಅತ್ಯಾಚಾರವೆಸಗಿದ್ದಾನೆ. ‌ಆತನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದ ವೇಳೆ ಗೆಳೆಯ ಹೊರಗೆ ಹೋಗಿದ್ದ. ಬಾಲಕಿಯನ್ನು ಮನೆಯಲ್ಲಿ ಉಳಿಸಿಕೊಂಡ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ

BREAKING NEWS
Loading latest news...
Join our WhatsApp Channel Powered By : Online Pudu