-->

Job in Court- Steno Post-  ನ್ಯಾಯಾಲಯದಲ್ಲಿ ಶೀಘ್ರ ಲಿಪಿಗಾರ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Job in Court- Steno Post- ನ್ಯಾಯಾಲಯದಲ್ಲಿ ಶೀಘ್ರ ಲಿಪಿಗಾರ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 ನ್ಯಾಯಾಲಯದಲ್ಲಿ 5 ಶೀಘ್ರ ಲಿಪಿಗಾರ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ





ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಗ್ರೇಡ್ III - 5 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಓದಬಹುದು.



ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ: 30/11/2021



ವಿದ್ಯಾರ್ಹತೆ:


ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.


ಶೀಘ್ರಲಿಪಿಗಾರ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.


ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:


ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ನೇಮಕಾತಿಯ ಶೀಘ್ರಲಿಪಿಗಾರ ಗ್ರೇಡ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.


ವಯೋಮಿತಿ:

ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು. ಗರಿಷ್ಟ ವಯಸ್ಸು- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಅಭ್ಯರ್ಥಿಗಳಿಗೆ ಗರಿಷ್ಠ 38 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸು.



ಆಯ್ಕೆಯ ವಿಧಾನ:

ನ್ಯಾಯಾಲಯದ ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ. ಅಂತಹ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿ ಟೈಪಿಂಗ್ ಮಾಡಬಲ್ಲವರಾಗಿರಬೇಕು.



ನಿಗದಿತ ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100/-ರೂ.

ಉಳಿದ ಅಭ್ಯರ್ಥಿಗಳಿಗೆ 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.



ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ಈ ಅರ್ಜಿ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/vijayapura-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ 30-11-2021ರೊಳಗೆ ಪಾವತಿಸಬೇಕು.



ಶುಲ್ಕ ಪಾವತಿ ಕುರಿತು ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದು SBI ಯಾವುದೇ ಶಾಖೆಗೆ 3-12-2021ರೊಳಗೆ ಹಾಜರುಪಡಿಸಿ ಶುಲ್ಕ ಪಾವತಿಸಬೇಕು. ಈ ವಿಧಾನ ಹೊರತು ಪಡಿಸಿ ಬೇರಾವುದೇ ಮಾದರಿಯ ಪಾವತಿ (ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್)ಯಲ್ಲಿ ಶುಲ್ಕ ಸ್ವೀಕರಿಸವುದಿಲ್ಲ.



ಅರ್ಜಿ ಸಲ್ಲಿಸುವುದು ಹೇಗೆ:

https://districts.ecourts.gov.in/vijayapura-onlinerecruitment ಗೆ ಅಭ್ಯರ್ಥಿಗಳು ಭೇಟಿ ನೀಡಬಹುದು. ಈ ವೆಬ್‌ಸೈಟ್ ಲಿಂಕ್‌ನಲ್ಲಿ ಕೇಳಿರುವ ಅಗತ್ಯ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಕೊನೆ ದಿನ : 30-11-2021.



ಆನ್‌ಲೈನ್ ಹೊರತುಪಡಿಸಿ ಬೇರಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.


Ads on article

Advertise in articles 1

advertising articles 2

Advertise under the article