
ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ಮುಂದುವರಿದ ವಿದ್ಯಾರ್ಥಿಗಳ ನಡುವಿನ ಗಲಾಟೆ; ಇಬ್ಬರು ವಿದ್ಯಾರ್ಥಿಗಳು ಗಂಭೀರ
Wednesday, November 24, 2021
ಪುತ್ತೂರು: ತಾಲೂಕಿನ ಕೊಂಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಬುಧವಾರ ಮತ್ತೆ ಹೊಡೆದಾಟ ನಡೆದಿದೆ. ಈ ಸಂದರ್ಭ ಇಬ್ಬರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.
ಸೈಫುದ್ದೀನ್ ಹಾಗೂ ಇಮ್ರಾನ್ ಗಾಯಗೊಂಡವರನ್ನು ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಬಗ್ಗೆ ವರದಿಯಾಗಿದೆ.
ವಿದ್ಯಾರ್ಥಿಗಳ ನಡುವೆ ನಿನ್ನೆ ನಡೆದಿರುವ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳು ಪುತ್ತೂರು ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ 30 ಮಂದಿ ವಿದ್ಯಾರ್ಥಿಗಳ ಗುಂಪೊಂದು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ವರದಿಯಾಗಿದೆ. ಗಾಯಗೊಂಡವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನಿನ್ನೆಯ ಪ್ರಕರಣ: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ವಿದ್ಯಾರ್ಥಿಗಳ ತಂಡದ ನಡುವೆ ಹೊಡೆದಾಟ ನಡೆದಿದೆ. ಈ ಗಲಾಟೆಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿಗಳಾದ ಕೊಡಿಪ್ಪಾಡಿ ನಿವಾಸಿ ಆದಿಲ್, ಪ್ರಣಾಮ್ ಮತ್ತು ಬನ್ನೂರು ಕರ್ಮಲ ನಿವಾಸಿ ಆದಿತ್ಯ ಅವರು ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.