ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಹರ್ಭಜನ್ ಸಿಂಗ್


ಮುಂಬಯಿ: ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು  ಎಲ್ಲಾ ಮಾದರಿಯ ಕ್ರಿಕೆಟ್‍ಗೆ  ಇಂದು ನಿವೃತ್ತಿ ಘೋಷಿಸಿದ್ದಾರೆ.



ಈ ಬಗ್ಗೆ ಸೋಷಿಯಲ್‌ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಕ್ರಿಕೆಟ್ ವೃತ್ತಿಜೀವನದ ಎಲ್ಲಾ ಸುಂದರ ಕ್ಷಣಗಳೊಂದಿಗೆ ಇಂದು ಎಲ್ಲಾ ಮಾದರಿ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ

ನನ್ನ 23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದುದ್ದಕ್ಕೂ  ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ. 



23 ವರ್ಷಗಳ ಕಾಲ ಭಾರತೀಯ ಕ್ರಿಕೆಟ್‍ಗೆ ಸೇವೆ ಸಲ್ಲಿಸಿದ ಹರ್ಭಜನ್ ಸಿಂಗ್ ಅವರು 2001ರಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದು ಇದು ಅವರ ವೃತ್ತಿ ಜೀವನದ ಶ್ರೇಷ್ಠ ಸಾಧನೆಯಾಗಿದೆ. 2007ರ ಟಿ20 ವಿಶ್ವಕಪ್ ಮತ್ತು 2011ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಜಯಿಸಿದ ಭಾರತ ತಂಡದ ಸದಸ್ಯರಾಗಿದ್ದ ಅವರು ಇಂಡಿಯಾ ವಿಶ್ವಕಪ್ ಜಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 


2016ರಲ್ಲಿ ಟೀಂ ಇಂಡಿಯಾ ಪರ ಕೊನೆಯದಾಗಿ  ಆಡಿದ್ದ ಹರ್ಭಜನ್, 103 ಟೆಸ್ಟ್ ಪಂದ್ಯಗಳಿಂದ 417 ವಿಕೆಟ್ ಪಡೆದಿದ್ದರು. ಈ ಮೂಲಕ ಅತಿ ಹೆಚ್ಚು ವಿಕೆಟ್ ಕಿತ್ತ ಭಾರತದ ಬೌಲರ್‌ಗಳ ಪೈಕಿ ಅವರು 4 ನೇ ಸ್ಥಾನ ಪಡೆದಿದ್ದಾರೆ.