Mangaluru: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಕೇರಳ ಮೂಲದ ಆರೋಪಿ‌ ಬಂಧನ

ಉಳ್ಳಾಲ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕೇರಳ ಮೂಲದ ಗೌತಮ್ ಎಂಬ ಆರೋಪಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದೀಗ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.‌ ಆರೋಪಿ‌ ಗೌತಮ್ 17ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ.

ಅಲ್ಲದೆ ಆಕೆಯನ್ನು ವಿವಾಹ ಮಾಡಿಕೊಡುವಂತೆ ಮನೆಯವರಲ್ಲಿ ಒತ್ತಾಯ ಮಾಡುತ್ತಿದ್ದ. ಬಳಿಕ ಫೋನ್ ಕರೆ ಮಾಡಿ ಸಂಪರ್ಕಿಸಿ ವಿವಾಹ ಮಾಡಿಕೊಡುವಂತೆ ಬೆದರಿಕೆ  ಒಡ್ಡಿದ್ದ ಎನ್ನಲಾಗಿದೆ.

ಪರಿಣಾಮ ನೊಂದ ಬಾಲಕಿಯ ತಾಯಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿರುವ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.