ಐದರ ಬಾಲೆಯ ಮೇಲೆ ಅತ್ಯಾಚಾರ: ಆರೋಪಿ ಅಂದರ್

ಕೊಟ್ಟಿಗೆಹಾರ: ಐದರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ‌‌ ನಡೆದಿದೆ.

ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಣಕಲ್ ಪೊಲೀಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಬಂಧಿಸಿದ್ದಾರೆ. ಈತನ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

BREAKING NEWS
Loading latest news...
Join our WhatsApp Channel Powered By : Online Pudu