-->
ಉಡುಪಿ: ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವ ತಂದೆಗೆ ಜೀವಿತಾವಧಿ ಜೈಲು ಶಿಕ್ಷೆ, ದಂಡ

ಉಡುಪಿ: ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವ ತಂದೆಗೆ ಜೀವಿತಾವಧಿ ಜೈಲು ಶಿಕ್ಷೆ, ದಂಡ

ಉಡುಪಿ: ಅಪ್ರಾಪ್ತ ಪುತ್ರಿಯ ಮೇಲೆಯೇ ಅತ್ಯಾಚಾರ ಎಸಗಿರುವ ಆರೋಪದಡಿ ಬಂಧಿತನಾಗಿದ್ದ ತಂದೆಯ ಮೇಲಿನ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೊ ತ್ವರಿತ ವಿಶೇಷ ನ್ಯಾಯಾಲಯ ಅಪರಾಧಿಗೆ ಜೀವಿತಾವಧಿ (ಕೊನೆ ಉಸಿರು ಇರುವ ತನಕ) ಜೈಲು ಶಿಕ್ಷೆ  ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಉಡುಪಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಮೇ ತಿಂಗಳಿನಲ್ಲಿ ತಂದಯೇ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. ಮನೆಯಲ್ಲಿ ತಾಯಿ ಹಾಗೂ ಕಿರಿಯ ಸಹೋದರ ಇಲ್ಲದ ಸಂದರ್ಭ ಈ 41 ವರ್ಷದ ತಂದೆ ತನ್ನ 14 ವರ್ಷ ಪ್ರಾಯದ ಅಪ್ರಾಪ್ತ ಪುತ್ರಿಯ ಮೇಲೆಯೇ ಅತ್ಯಾಚಾರ ಎಸಗಿದ್ದ. ಎರಡನೇ ಬಾರಿಯೂ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ. ಅಲ್ಲದೆ ಯಾರಿಗಾದರೂ ಹೇಳಿದಲ್ಲಿ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿದ್ದ. 

ಆದರೆ ಬಾಲಕಿ ಪಕ್ಕದ ಮನೆಯವರ ಸಹಕಾರದಿಂದ ತನ್ನ ತಾಯಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಮನೆಗೆ ಬಂದ ತಾಯಿ ಕೂಲಂಕುಷವಾಗಿ ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಈ ಬಗ್ಗೆ ತಾಯಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿ ತಂದೆಯನ್ನು ಬಂಧಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಠಾಣೆಯ ಅಂದಿನ ಸಿಪಿಐ ಸಿ.ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 23 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 11 ಮಂದಿಯನ್ನು ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತ ಬಾಲಕಿ, ತಾಯಿ ಹಾಗೂ ನೆರೆಮನೆಯಾಕೆ ನುಡಿದ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿತ್ತು. 

ಈ ಆಧಾರದಲ್ಲಿ ಬಾಲಕಿಯ ತಂದೆ ಅಪರಾಧಿ ಎಂದು ಸಾಬೀತಾಗಿದೆ ಎಂದು ತೀರ್ಪು ನೀಡಿರುವ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ ಅವರು ಅಪರಾಧಿಗೆ ಜೀವಿತಾವಧಿ ( ಕೊನೆ ಉಸಿರು ಇರುವ ತನಕ ) ಜೈಲು ಶಿಕ್ಷೆ , 20 ಸಾವಿರ ರೂ. ದಂಡ ಮತ್ತು ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ 5 ಸಾವಿರ ರೂ. ದಂಡ ವಿಧಿಸಿದ್ದು ಸಂತ್ರಸ್ತ ಬಾಲಕಿಗೆ ಸರಕಾರ 5 ಲಕ್ಷ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. 

ಉಡುಪಿಯ ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು‌.

Ads on article

Advertise in articles 1

advertising articles 2

Advertise under the article

holige copy 1.jpg