-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿದ್ಯಾರ್ಥಿನಿಗೆ 'ಕಿಸ್' ಕೊಡೆ ಎಂದು ಪೀಡಿಸಿಸುತ್ತಿದ್ದ ಪೋಲಿ ಶಿಕ್ಷಕನ ವಾಟ್ಸ್ಆ್ಯಪ್ ಸಂದೇಶ ಬಯಲು

ವಿದ್ಯಾರ್ಥಿನಿಗೆ 'ಕಿಸ್' ಕೊಡೆ ಎಂದು ಪೀಡಿಸಿಸುತ್ತಿದ್ದ ಪೋಲಿ ಶಿಕ್ಷಕನ ವಾಟ್ಸ್ಆ್ಯಪ್ ಸಂದೇಶ ಬಯಲು

ಹಾವೇರಿ: ಶಿಕ್ಷಕನೋರ್ವನು ‘ಕಿಸ್ ಕೊಡೇ, ಪ್ಲೀಸ್​ ಕಿಸ್​ ಮಾಡೇ..’ ಎಂದು ವಿದ್ಯಾರ್ಥಿನಿಗೆ ಪೀಡಿಸುತ್ತ ಮೊಬೈಲ್​ಗೆ ಕಳುಹಿಸಿದ್ದ ಅಶ್ಲೀಲ ಮೆಸೇಜ್​ಗಳು ಈಗ ವೈರಲ್​ ಆಗಿವೆ.  ಮಾತೆತ್ತಿದರೆ ಪ್ರತಿನಿತ್ಯ ವಿದ್ಯಾರ್ಥಿನಿಗೆ ಕಿಸ್ ಕೊಡು ಎಂದು ಈ ಪೋಲಿ ಶಿಕ್ಷಕ ಸಂದೇಶ ಕಳುಹಿಸುತ್ತಿದ್ದ. ಇದೀಗ ಆತನ ವಿರುದ್ಧ ಗ್ರಾಮಸ್ಥರು ಆಕ್ರೋಶ ಪ್ರತಿಭಟನೆ ನಡೆಸಿದ್ದಾರೆ.

ಈ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದಿದೆ. ದೇವರಗುಡ್ಡದ ಹೈಸ್ಕೂಲ್​ನ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಕಳೆದ ವರ್ಷ ಆನ್​ಲೈನ್​ ಕ್ಲಾಸ್​ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್​ ನಂಬರ್​ ಪಡೆದಿದ್ದ. ಈತ ಆನ್​ಲೈನ್​ ಪಾಠ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯೊಂದಿಗೆ ಪ್ರತಿನಿತ್ಯ ಚಾಟ್ ಮಾಡುತ್ತಿದ್ದ. ಅಲ್ಲದೆ ಮಾತೆತ್ತಿದರೆ ಕಿಸ್ ಕೊಡು ಎಂದು ಪೀಡಿಸುತ್ತಿದ್ದ. 


ಈತ ಕಳುಹಿಸಿರುವ ಅಶ್ಲೀಲ ಸಂದೇಶಗಳ​ ಸ್ಕ್ರೀನ್ ಶಾರ್ಟ್​ಗಳು ಎಲ್ಲೆಡೆ ವೈರಲ್ ಆಗಿದೆ. ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಬಂಧಿಸಬೇಕು. ಕೆಲಸದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಬೆಳಗ್ಗೆ ಗ್ರಾಮಸ್ಥರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಶಾಲೆಗೆ ಬೀಗ ಜಡಿದು ಆಕ್ರೋಶ ಹೊರ ಹಾಕಿದ್ದಾರೆ. 

ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ