-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಕಲೇಶಪುರ: ಆತಂಕ ಹುಟ್ಟಿಸಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಹಿಡಿದ ಸ್ನೇಕ್ ಸಗೀರ್

ಸಕಲೇಶಪುರ: ಆತಂಕ ಹುಟ್ಟಿಸಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಹಿಡಿದ ಸ್ನೇಕ್ ಸಗೀರ್

ಸಕಲೇಶಪುರ: ಇಲ್ಲಿನ ಕುಂಬರಡಿ ಎಂಬ ಗ್ರಾಮದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಉರಗ ಸ್ನೇಹಿ ಸಗೀರ್ ಅವರು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.

ಹಾನುಬಾಳ್ ಹೋಬಳಿ ಹೆಬ್ಬಸಾಲೆ ಗ್ರಾಪಂ ವ್ಯಾಪ್ತಿಯ ಕುಂಬರಡಿ ಗ್ರಾಮದ ನಿಂಗಪ್ಪ ಎಂವವರ ಕಾಫಿ ತೋಟದಲ್ಲಿ ಏಕಾಏಕಿ ಬೃಹತ್ ಗಾತ್ರದ ಕಾಳಿಂಗಸರ್ಪವೊಂದು ಕಾಣಿಸಿಕೊಂಡಿದೆ. ಪರಿಣಾಮ ಆತಂಕಿತರಾದ ಮನೆಯವರು ಸ್ಥಳೀಯರ ಸಹಾಯದಿಂದ ಹಾವಿನ ಚಲನವಲನಗಳನ್ನು ಗಮನಿಸಿ ಪಟ್ಟಣದ ಉರಗ ಸ್ನೇಹಿ ಸಗೀರ್‌ರವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಗೀರ್, ಗ್ರಾಮಸ್ಥರಾದದ ಶಶಿಧರ್, ಸುರೇಶ್, ತನುಜ್, ವಿಜಿತ್‌ರವರ ಸಹಾಯದಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಸುಮಾರು 11 ಅಡಿ ಉದ್ದದ ಈ ಕಾಳಿಂಗ ಸರ್ಪವು ನಿಂಗಪ್ಪ ಹಾಗೂ ಅವರ ಅಕ್ಕಪಕ್ಕದ ಕಾಫಿ ತೋಟಗಳಲ್ಲಿ ಸಂಚರಿಸಿ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಟಿ ಮಾಡಿತ್ತು. ಇದೀಗ ಉರಗ ಸ್ನೇಹಿ ಸ್ನೇಕ್ ಸಗೀರ್ ಹಾಗೂ ಗ್ರಾಮಸ್ಥರ ಸಹಾಯದಿಂದ ಕಾಳಿಂಗಸರ್ಪವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ. 

Ads on article

Advertise in articles 1

advertising articles 2

Advertise under the article

ಸುರ