-->
ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನಿಗೆ 30 ವರ್ಷಗಳ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನಿಗೆ 30 ವರ್ಷಗಳ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

ಕೋಲಾರ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯುವಕನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. 

2019ರ ಅ.10ರಂದು ಕೆಜಿಎಫ್​ನ ಮಂಜುನಾಥ ನಗರದಲ್ಲಿರುವ ತನ್ನ ಮನೆಯಲ್ಲಿ ಒಬ್ಬಳೇ ಇದ್ದ ಅಪ್ರಾಪ್ತೆ ಮೇಲೆ 26 ವರ್ಷದ ಯುವಕ ಕುಟ್ಟಿ ಅಲಿಯಾಸ್​ ತಮಿಳರಸನ್ ಅತ್ಯಾಚಾರವೆಸಗಿದ್ದ. ಈ ಸಂಬಂಧ ಕೆಜಿಎಫ್​ನ ರಾರ್ಬಟ್​ಸನ್​ಪೇಟೆಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಠಾಣೆಯ ಅಂದಿನ ಇನ್​ಸ್ಪೆಕ್ಟರ್​ ಎಂ.ಸೂರ್ಯಪ್ರಕಾಶ್​ ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ಪಿ.ದೇವಮಾನೆಯವರು ಅಪರಾಧಿ ಕುಟ್ಟಿ ಅಲಿಯಾಸ್​  ತಮಿಳರಸನ್ ಗೆ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ‌.  ಸರ್ಕಾರದ ಪರವಾಗಿ ಸರ್ಕಾರದ ವಿಶೇಷ ಅಭಿಯೋಜಕ ಎಸ್​. ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು. 

Ads on article

Advertise in articles 1

advertising articles 2

Advertise under the article