-->

ಭೀಕರ ರಸ್ತೆ ಅಪಘಾತ: 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಬಾಲಕಿ ಸ್ಥಳದಲ್ಲೇ ಮೃತ್ಯು, ತಾಯಿ ಗಂಭೀರ

ಭೀಕರ ರಸ್ತೆ ಅಪಘಾತ: 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಬಾಲಕಿ ಸ್ಥಳದಲ್ಲೇ ಮೃತ್ಯು, ತಾಯಿ ಗಂಭೀರ

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ಅಪಘಾತವಾಗಿ 'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋವೊಂದರಲ್ಲಿ ಸ್ಪರ್ಧಿಯಾಗಿರುವ ಆರು ವರ್ಷದ ಬಾಲಕಿ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ವಾಜರಹಳ್ಳಿ ಬಳಿ ನಡೆದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ‌. 

ಸಮನ್ವಿ(6) ಮೃತ ದುರ್ದೈವಿ ಬಾಲಕಿ. ಸಮನ್ವಿ ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ 'ನನ್ನಮ್ಮ ಸೂಪರ್ ಸ್ಟಾರ್' ಸ್ಪರ್ಧಿಯಾಗಿದ್ದಳು. ಇದೇ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಬಾಲಕಿಯ ತಾಯಿ ಅಮೃತಾ ನಾಯ್ಡು ಅವರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತಾಯಿ ಅಮೃತಾ ನಾಯ್ಡು ಹಾಗೂ ಮಗಳು ಸಮನ್ವಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳುತ್ತಿದ್ದರು‌. ಈ ಸಂದರ್ಭ ಇವರ ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ ಹೊಡೆದಿದೆ. ಪರಿಣಾಮ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್ ಗೆ ರವಾನಿಸಲಾಗಿದೆ. 

ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೃತಾ ನಾಯ್ಡು ಅವರು ಹರಿಕಥೆ ದಾಸರಾದ ದಿ.ಗುರುರಾಜುಲು ನಾಯ್ಡು ಅವರ ಮೊಮ್ಮಗಳು.

Ads on article

Advertise in articles 1

advertising articles 2

Advertise under the article