ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ- ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಕೋರಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಿ ಅಧಿಸೂಚನೆ ಹೊರಡಿಸಿದೆ.
ಪ್ರಯೋಗಾಲಯ ಸಹಾಯಕರು, ವಾಚನಾಲಯ ಸಹಾಯಕರು ಸಹಿತ ಹಲವು ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಫೆಬ್ರವರಿ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿ.
ಹೆಚ್ಚಿನ ಮಾಹಿತಿಗೆ ಆಸಕ್ತರು mangaloreuniversity.ac.in ಗೆ ಭೇಟಿ ನೀಡಬಹುದು.
ಹುದ್ದೆಯ ವಿವರ:
ಪ್ರಯೋಗಾಲಯ ಸಹಾಯಕರು( ಲ್ಯಾಬ್ ಅಸಿಸ್ಟೆಂಟ್)
ಲೈಬ್ರರಿ ಅಸಿಸ್ಟೆಂಟ್ (ವಾಚನಾಲಯ ಸಹಾಯಕರು)
ಎ. ಸಿ. ಮೆಕ್ಯಾನಿಕ್- ಹವಾನಿಯಂತ್ರಣ ತಂತ್ರಜ್ಞರು
ಪ್ಲಂಬರ್
ಶೈಕ್ಷಣಿಕ ವಿದ್ಯಾರ್ಹತೆ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಆಯಾ ಹುದ್ದೆಗಳಿಗೆ ಅಗತ್ಯವಿರುವ ಮತ್ತು ನಿಯಮ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.
ಲ್ಯಾಬ್ ಅಸಿಸ್ಟೆಂಟ್- ಬಿಎಸ್ಸಿ ಪದವಿ ಮಾಡಿರಬೇಕು
ಲೈಬ್ರರಿ ಅಸಿಸ್ಟೆಂಟ್- ಪಿಯುಸಿ, ಡಿಪ್ಲೋಮಾ ಉತ್ತೀರ್ಣರಾಗಿರಬೇಕು.
ಎ.ಸಿ ಮೆಕ್ಯಾನಿಕ್- ಪಿಯುಸಿ ಪಾಸಾಗಿರಬೇಕು.
ಪ್ಲಂಬರ್- ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಹೊಂದಿರಬೇಕು.
ವಯೋಮಿತಿ: ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಇರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಸಿಂಡಿಕೇಟ್ ಹಾಲ್, ಮಂಗಳೂರು ವಿಶ್ವವಿದ್ಯಾನಿಲಯ
ಮಂಗಳಗಂಗೋತ್ರಿ, ಮಂಗಳೂರು. ಕರ್ನಾಟಕ