ಶಿರಸಿ: ಅಪರಿಚಿತರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದಾರೆಂದು ಆರೋಪಿಸಿ ಬುಧವಾರ ಬನವಾಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪ್ರಾಪ್ತೆಯು ಹವಾಲ್ದಾರ್ ಗಲ್ಲಿಯಿಂದ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಆರೋಪಿಗಳು ಅಪಹರಿಸಿದ್ದಾರೆ ಎಂದು ಅಪ್ರಾಪ್ತ ಬಾಲಕಿಯ ತಾಯಿ ಬನವಾಸಿ ಪೋಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.