ಶ್ರೀರಂಗಪಟ್ಟಣ : ತರಗತಿಗೆ ಮೊಬೈಲ್ ತಂದಿರುವುದಕ್ಕೆ ಶಿಕ್ಷೆ ವಿಧಿಸುವ ನೆಪದಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಗಣಂಗೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಘಟನೆ ಕಳೆದ ಒಂದು ವಾರದ ಹಿಂದೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತರಗತಿಗೆ ಮೊಬೈಲ್ ತಂದಿರುವ 8ನೇ ತರಗತಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದ ಮುಖ್ಯ ಶಿಕ್ಷಕಿ ಸ್ನೇಹಲತಾ ಕಿರುಕುಳ ನೀಡಿ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಪೋಷಕರು ಮುಖ್ಯ ಶಿಕ್ಷಕಿಯ ವಿರುದ್ದ ದೂರು ನೀಡಿದ್ದಾರೆ. ತಕ್ಷಣ ಆಕೆಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ಹಾಗೂ ಬಿಇಒ ಅನಂತರಾಜುರವರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ.