
ಶಾಲಾ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಮುಖ್ಯ ಶಿಕ್ಷಕ: ಪೊಕ್ಸೊ ಪ್ರಕರಣ ದಾಖಲು
1/16/2022 07:12:00 PM
ನರಸಿಂಹರಾಜಪುರ: ಶಾಲಾ ಶಿಕ್ಷಕನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವೊಂದು ಕೇಳಿ ಬಂದಿದ್ದು, ಶಿಕ್ಷಕನ ವಿರುದ್ಧ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನರಸಿಂಹರಾಜಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಭು ನಾಯಕ್ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರುವ ಪೊಲೀಸ್ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿತನಾಗಿದ್ದ ಶಿಕ್ಷಕ ಪ್ರಭು ನಾಯಕ್ ನಾಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ ಎಂದು ತಿಳಿದು ಬಂದಿದೆ.