-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ - ಬಿಜೆಪಿ ಕಚೇರಿಯೆದುರು ಪರಸ್ಪರ ಪ್ರತಿಭಟನೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮಾಕ್ಕೆ ತೆರೆ

ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ - ಬಿಜೆಪಿ ಕಚೇರಿಯೆದುರು ಪರಸ್ಪರ ಪ್ರತಿಭಟನೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮಾಕ್ಕೆ ತೆರೆ

ಮಂಗಳೂರು: ಪ್ರಧಾನಿ ಮೋದಿಯವರ ಪಂಜಾಬ್‌ ಭೇಟಿ ಸಂದರ್ಭ ಭದ್ರತಾ ವೈಫಲ್ಯದ ಹಿನ್ನೆಲೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ  ದ.ಕ.ಕಾಂಗ್ರೆಸ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ತಡೆದು ಬಿಜೆಪಿ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಕಾಂಗ್ರೆಸ್ ಕಚೇರಿ ಮುಂದೆ ಬಂದಿದೆ. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತ ಲಾರೆನ್ಸ್ ಕಾಂಗ್ರೆಸ್ ಧ್ವಜ ಹಾರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.






ಅಷ್ಟರಲ್ಲಾಗಲೇ ಕಾಂಗ್ರೆಸ್ ನ ಇನ್ನಷ್ಟು ಕಾರ್ಯಕರ್ತರು ಆಗಮಿಸಿ ಎರಡೂ ಕಡೆಯ ಕಾರ್ಯಕರ್ತರ ನಡುವೆ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಿಸಲು ಯತ್ನಿಸಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರು ಹಿಂದೆ ಹೋಗುತ್ತಿದ್ದಂತೆ ಪರಿಸ್ಥಿತಿ ತಿಳಿಯಾಗಿದೆ. 

ಆದರೆ ಅಷ್ಟರಲ್ಲಾಗಲೇ ಅಲ್ಲಿಗೆ ಆಗಮಿಸಿದ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ತಾವೂ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುದಾಗಿ ಹೇಳಿ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯತ್ತ ಪಾದಯಾತ್ರೆಗೆ ಅಣಿಯಾಗಿದ್ದಾರೆ. ಆದರೆ ಪೊಲೀಸರು ಪ್ರತಿಭಟನೆ ನಡೆಸದಂತೆ ಅವರ ಮನವೊಲಿಸಲು ಯತ್ನಿಸಿದರೂ ಕೇಳದೆ ಕಾಂಗ್ರೆಸ್ ಕಾರ್ಯಕರ್ತರ ಪಾದಯಾತ್ರೆ ಬಿಜೆಪಿ ಕಚೇರಿಯತ್ತ ಹೋಗಿದೆ. 





ಈ ಸಂದರ್ಭ ಪೊಲೀಸರು ಅವರನ್ನು ಅರ್ಧದಲ್ಲಿ ತಡೆದ್ದಾರೆ. ಆದ್ದರಿಂದ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಆಗ ಸ್ಥಳಕ್ಕೆ ಆಗಮಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪ್ರತಿಭಟನೆ ನಿಲ್ಲಿಸಲು ಮನವಿ ಮಾಡಿದ್ದಾರೆ. ಆದರೂ ಪ್ರತಿಭಟನೆಯನ್ನು ಕೈಬಿಡದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ಮೂಲಕ ಕಾಂಗ್ರೆಸ್ ಬಿಜೆಪಿ ಹೈಡ್ರಾಮಾಕ್ಕೆ ಅಂತಿಮ ಚುಕ್ಕಿ ಬಿದ್ದಿದೆ.


Ads on article

Advertise in articles 1

advertising articles 2

Advertise under the article

ಸುರ