ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ವಿವಾಹಿತ ಮಹಿಳೆಯ ಎಳೆದೊಯ್ದು ಸಾಮೂಹಿಕ ಅತ್ಯಾಚಾರ..!

ರಾಜಸ್ಥಾನ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆಯೊಂದು ಉದಯಪುರ ಜಿಲ್ಲೆ ಝಡೋಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಡಹಗಲೇ ಈ ಕೃತ್ಯ ನಡೆದಿದ್ದು, ಅತ್ಯಾಚಾರ ಎಸಗಿರುವ ಆರೋಪಿಗಳು ಆ ಬಳಿಕ ಪರಾರಿಯಾಗಿದ್ದಾರೆ. ಈ ಪೈಶಾಚಿಕ ಕೃತ್ಯ ಝಡೋಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಗ್‌ಪುರ ಚೆಕ್‌ ಪೋಸ್ಟ್‌ನಿಂದ ಕೇವಲ 500 ಮೀ. ದೂರದಲ್ಲಿ ನಡೆದಿದೆ. 

ಸಂತ್ರಸ್ತೆಯು ಇಬ್ಬರು ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮೂವರು ಯುವಕರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ‌.  ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದೆ.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಸುತ್ತಮುತ್ತಲಿನ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.