-->

ಒಡಿಶಾದ ಪುರಿಯಲ್ಲಿ ಕೇವಲ ಮೂರೇ ದಿನಗಳಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ !

ಒಡಿಶಾದ ಪುರಿಯಲ್ಲಿ ಕೇವಲ ಮೂರೇ ದಿನಗಳಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ !

ಪುರಿ, ಒಡಿಶಾ: ದಿನದಿಂದ ದಿನಕ್ಕೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಒಡಿಶಾದ ಪುರಿ ಮತ್ತಿತರೆಡೆ ಕೇವಲ ಮೂರೇ ದಿನಗಳಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಹಾಗೂ ಅತ್ಯಾಚಾರ ಯತ್ನದಂತಹ ಪ್ರಕರಣಗಳು ಬೆಳಕಿಗೆ ಬಂದಿದೆ.

ಮೊದಲ ಪ್ರಕರಣದಲ್ಲಿ 2 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಆಕೆಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುರಿ ಜಿಲ್ಲೆಯ ಸೀ ಬೀಚ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಕಳೆದ ವರ್ಷ ಈ ವ್ಯಕ್ತಿ ತನ್ನ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ 8 ತಿಂಗಳ ಕಾಲ ಜೈಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡನೇ ಪ್ರಕರಣದ ಬಲಿಪಂಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಂಗಳವಾರ 5 ವರ್ಷದ ನೆರೆಮನೆಯ ಬಾಲಕಿಯ ಮೇಲೆ ಅತ್ಯಾಚಾರದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ. ಚಿಕನ್ ಸಾಂಬಾರ್​ ಕೊಡುವುದಾಗಿ ಮನೆಗೆ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿ ದೂರು ನೀಡಿದ್ದಾಳೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈಕೆಗೆ ಕಟಕ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ‌. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಪುರಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮಯೂರ್​ಭಂಜ್ ಬಡಸಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ವಿಶೇಷ ಚೇತನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಪೊಲೀಸರು ಸ್ವಯಂಘೋಷಿತ ದೇವಮಾನವನನ್ನು ಬಂಧಿಸಿದ್ದಾರೆ. ಸಂತ್ರಸ್ತೆಯ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಂತ್ರಸ್ತೆಯ ಪೋಷಕರು ಈ ವಿಷಯವನ್ನು ಗ್ರಾಮದಲ್ಲಿ ಪಂಚಾಯತಿ ಮಾಡಿಸಿದ್ದು, ಆರೋಪಿಗೆ 90 ಸಾವಿರ‌ ರೂ. ದಂಡ ವಿಧಿಸಲಾಗಿದೆ. ಆದರೆ ಆತ 5 ಸಾವಿರ ರೂ. ದಂಡವನ್ನು ಮಾತ್ರ ಪಾವತಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಪೊಲೀಸರು ತನಿಖೆ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article