ಕಾರ್ಕಳ: ಅಸ್ವಸ್ಥಗೊಂಡಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ.
ಬೈಲೂರು ಸರಕಾರಿ ಪ.ಪೂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಓದುತ್ತಿರುವ ವಿದ್ಯಾರ್ಥಿನಿ ಶರಣ್ಯಾ (18)ಮೃತಪಟ್ಟ ವಿದ್ಯಾರ್ಥಿನಿ.
ಜ.9ರಂದು ಶರಣ್ಯಾ ತಲೆನೋವು ಹಾಗೂ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿ ಆಕೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.