-->

Training with Stifund- ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

Training with Stifund- ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ






ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಸ್ನಾತಕೋತ್ತರ ಪದವೀಧರ ಪತ್ರಿಕೋದ್ಯಮ ಅಭ್ಯರ್ಥಿಗಳಿಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ


ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಪಿ./ ಟಿ.ಎಸ್.ಪಿ) ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.


ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಮಂದಿ ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 08 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.


ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 40 ವರ್ಷ ಆಗಿರಬೇಕು.


ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇತರ ಪೂರಕ ದಾಖಲೆಗಳನ್ನು PDF ಮಾದರಿಯಲ್ಲಿ ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2022@gmail.com ಮೂಲಕ ಕಳಿಸಬೇಕು. ಅಂಚೆ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ : 27-01-2022 ಕೊನೆ ದಿನ. ಆ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಈಗಾಗಲೇ ಸರ್ಕಾರದಿಂದ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು/ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದರೆ ಅವರ ಅರ್ಜಿ ತಿರಸ್ಕರಿಸಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಹೂಡಲಾಗುವುದು.


ಈ ಕುರಿತ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- ಫೋನ್: 08022860164, ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು - 560 001 ಸಂಪರ್ಕಿಸಬಹುದಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100