ಮಂಗಳೂರು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅಂದರ್; 2.220 ಕೆಜಿ ಗಾಂಜಾ ವಶಕ್ಕೆ

ಮಂಗಳೂರು: ಕೇರಳ ರಾಜ್ಯದ ಕುಂಜತ್ತೂರಿನಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಲೆತ್ನಿಸುತ್ತಿದ್ದ  ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2.220 ಕೆಜಿ ಗಾಂಜಾ ಸಹಿತ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹೊಸಂಗಡಿಯ ಮೂಡಂಬೈಲ್ ಶಾಲೆ ಬಳಿ ನಿವಾಸಿ ಪ್ರಫುಲ್ ರಾಜ್(23), 
ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ಬೊಳಿಯಾರು ಆಂಬಿತ್ತಡಿ ಮನೆ ನಿವಾಸಿ ಅವಿನಾಶ್(24) ಬಂಧಿತ ಆರೋಪಿಗಳು. ಇವರು ಕೇರಳದಿಂದ ಮಂಗಳೂರಿಗೆ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ಬಂಧಿಸಲಾಗಿದೆ.

ಬಂಧಿತರಿಂದ 2.220 ಕೆಜಿ ತೂಕದ ಗಾಂಜಾ, 1,200 ರೂ. ನಗದು, 2 ಮೊಬೈಲ್ ಫೋನ್ ಗಳು ಹಾಗೂ ಮಾರುತಿ ಸ್ವಿಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 5,50,400 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ಪೈಕಿ ಅವಿನಾಶ್ ಎಂಬಾತನು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ವಾಹನಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu