ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಹಾಡಹಗಲೇ ಮಹಿಳೆಯನ್ನು ಅತ್ಯಾಚಾರ ಮಾಡಿ, ಕೊಲೆಗೈದು, ಚಿನ್ನಾಭರಣ ದೋಚಿದ ಆರೋಪಿ 24 ಗಂಟೆಯಲ್ಲಿ ಸೆರೆ

ಹುಬ್ಬಳ್ಳಿ: ಮಹಿಳೆಯೋರ್ವರನ್ನು ಅತ್ಯಾಚಾರ ಮಾಡಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ.

ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಎಂಬಾತ ಬಂಧಿತ ಆರೋಪಿ. ಈತ ಉರುವಲು ಕಟ್ಟಿಗೆ ತರಲು ಹೋಗಿದ್ದ ಲಕ್ಷ್ಮೀ ಕಳ್ಳಿಮನಿ ಎಂಬಾಕೆಯನ್ನು ಹಾಡುಹಗಲೇ ಅತ್ಯಾಚಾರಗೈದು ಕೊಲೆಗೈದಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ. 

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಹುಬ್ಬಳ್ಳಿ ಮತ್ತು ಕುಂದಗೋಳ ಪೊಲೀಸರು ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆ ಬಳಿಕ‌ ಕೋಲಾರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಮಹಮ್ಮದ್ ಅಲಿಯನ್ನು 24 ಗಂಟೆಗಳಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತನಿಂದ 8 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.