ಕೋಲಾರ: 9ನೇ ತರಗತಿ ಬಾಲಕಿಯ ಸಾಮೂಹಿಕ ಅತ್ಯಾಚಾರಗೈದ ನಾಲ್ವರು ಅಂದರ್

ಕೋಲಾರ: 9ನೇ ತರಗತಿ ಅಪ್ರಾಪ್ತ ಬಾಲಕಿಯ ಮೇಲೆ  ಸಾಮೂಹಿಕ ಅತ್ಯಾಚಾರವೆಸಗಿರುವ ನಾಲ್ವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ. ಈ ಪೈಶಾಚಿಕ ಕೃತ್ಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಆನಂದಕುಮಾರ್(25), ಕಾಂತರಾಜು(23), ಪ್ರವೀಣ್(21) ಮತ್ತು ವೇಣು (19) ಬಂಧಿತ ಕಾಮುಕರು.

ಶುಕ್ರವಾರ ಸಂತ್ರಸ್ತ ಬಾಲಕಿಯ ಹುಟ್ಟು ಹಬ್ಬವಿತ್ತು. ಆದರೆ ತಂದೆ ಆಕೆಗೆ ಹುಟ್ಟುಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲವೆಂಬ ಕೋಪದಲ್ಲಿ ಸಂಜೆ ಮನೆಯಿಂದ ಹೊರಗೆ ಬಂದಿದ್ದಳು ಎನ್ನಲಾಗಿದೆ. ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಒಂಟಿಯಾಗಿ ಕುಳಿತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಈ ನಾಲ್ವರು ಕಾಮುಕರು ಕೆಲಸ ಕೊಡಿಸುವ ಆಸೆ ತೋರಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 

ಬಾಲಕಿಯ ಚೀರಾಟ ಕೇಳಿ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿಯನ್ನು ರಕ್ಷಿಸಿ ಬಂಗಾರಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu