ಮಂಗಳೂರು: ನಿಯಂತ್ರಣ ಕಳೆದುಕೊಂಡ ಕಾರು ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ನಿಯಂತ್ರಣ ಕಳೆದುಕೊಂಡು ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಚಾಲಕ ಗಾಯಗೊಂಡ ಘಟನೆ ಉರ್ವದ ಚಿಲಿಂಬಿ ಮಠದಕಣಿ ಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಅಪಘಾತ ನಡೆದಿರುವ ಭಯಾನಕ ದೃಶ್ಯವು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.




ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದ‌ ಕಾರಿನ ಬ್ರೇಕ್ ಪೆಡಲ್ ನ ಅಡಿಯಲ್ಲಿ ನೀರಿನ ಬಾಟಲೊಂದು ಸಿಲುಕಿ ಸ್ಟ್ರಕ್ ಆಗಿತ್ತು. ಪರಿಣಾಮ ಬ್ರೇಕ್ ಪೆಡಲ್ ವರ್ಕ್ ಆಗದೆ ಕಾರು ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿತ್ತು ಎನ್ನಲಾಗಿದೆ. 


ಅಪಘಾತದ ಪರಿಣಾಮ ಕಾರು ವೇಗವಾಗಿ ಬಂದು ನಿಂತಿದ್ದ ದ್ವಿಚಕ್ರ ವಾಹನವೊಂದಕ್ಕೆ ಗುದ್ದಿದೆ. ಪರಿಣಾಮ ದ್ವಿಚಕ್ರ ಸವಾರನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ 2 ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ಜಖಂ ಆಗಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ‌.  ಚಾಲಕ ವಿವೇಕಾನಂದ ಶೆಣೈ ಮೇಲೆ ಮಂಗಳೂರಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu