
ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಿಕ್ಷಾದಿಂದ ಎಸೆಯಲ್ಪಟ್ಟು ವೃದ್ಧ ಮಹಿಳೆ ಮೃತ್ಯು
2/06/2022 07:31:00 AM
ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದಿರುವ ಅಪಘಾತದಲ್ಲಿ ವೃದ್ಧ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟಿರುವ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.
ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟ ಮಹಿಳೆ. ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಎಂಬವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಕಾರು ಹಾಗೂ ರಿಕ್ಷಾ ಜಖಂಗೊಂಡಿವೆ. ಆದರೆ ಕಾರಿನಲ್ಲಿದ್ದವರು ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.