-->

ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ತೆರವು ಮಾಡಲು ಧರಣಿ ನಡೆಸುತ್ತಿದ್ದ 'ಆಪದ್ಬಾಂಧವ' ಆಸೀಫ್ ಪೊಲೀಸ್ ವಶಕ್ಕೆ

ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ತೆರವು ಮಾಡಲು ಧರಣಿ ನಡೆಸುತ್ತಿದ್ದ 'ಆಪದ್ಬಾಂಧವ' ಆಸೀಫ್ ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಸುರತ್ಕಲ್ ನಲ್ಲಿರುವ ಎನ್ಐಟಿಕೆ ಬಳಿಯ ಟೋಲ್ ಗೇಟ್ ತೆರವಿಗೆ ಧರಣಿ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ 'ಆಪದ್ಬಾಂಧವ' ಆಸೀಫ್ ಅವರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ಟೋಲ್ ಗೇಟ್ ಅನ್ನು ಅನಧಿಕೃತವಾಗಿ ನಡೆಸಲಾಗುತ್ತಿದ್ದು, ಅದನ್ನು ತೆರವುಗೊಳಿಸಬೇಕೆಂದು 'ಆಪದ್ಬಾಂಧವ' ಆಸೀಫ್ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಈ ನಡುವೆ ಮಂಗಳಮುಖಿಯರ ತಂಡವೊಂದು ಆಸೀಫ್ ಮೇಲೆ ಅಸಭ್ಯ ದಾಳಿ‌ ನಡೆಸಿದ್ದರು. ಅಲ್ಲದೆ ಆಸೀಫ್ ಹಾಗೂ ಅವರ ತಂಡ ತಮ್ಮ ಮೇಲೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಲು ಯತ್ನಿಸುತ್ತಿದ್ದಾರೆ ಎಂದು ಮಂಗಳಮುಖಿಯರೂ ಪೊಲೀಸ್ ದೂರು ನೀಡಿದ್ದರು‌.

ಇದೀಗ ಎನ್ಎಚ್ಎ ಕೂಡಾ ಆಸೀಫ್ ಅವರು ಸುರತ್ಕಲ್ ನಲ್ಲಿ ಅನಧಿಕೃತ ಟೋಲ್ ಗೇಟ್ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ಜೊತೆಗೆ ಸಾಕಷ್ಟು ವಾಹನಗಳ ಸಂಚಾರವಿರುವ ರಾಷ್ಟ್ರೀಯ ಹೆದ್ದಾರಿ ಬಳಿಯೇ ಈ ಧರಣಿ ನಡೆಸುತ್ತಿದ್ದರಿಂದ ತೊಂದರೆಯಾಗುತ್ತಿದೆ ಎಂದು ದೂರು ದಾಖಲಾಗಿತ್ತು. ಜೊತೆಗೆ ಆಪದ್ಬಾಂಧವ ಆಸೀಫ್ ಈ ಧರಣಿ ಮಾಡಲು ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಆಪದ್ಬಾಂಧವ ಆಸೀಫ್ ಅವರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಅವರನ್ನು ಬಂಧಿಸಿಲ್ಲ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100