ಮಂಗಳೂರು: ಪ್ರಾರ್ಥನಾ ಮಂದಿರ ಕೆಡವಿರುವ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ನಗರದ ಕೂಳೂರು 
ಎಂಬಲ್ಲಿನ ಪಂಜಿಮೊಗರು ಉರುಂದಾಡಿ ಗುಡ್ಡೆಯ ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ಕೆಡವಿ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಜ್ಪೆ ನಿವಾಸಿ ಲತೀಶ್(28) ಹಾಗೂ ಪಂಜಿಮೊಗರು, ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ್(36) ಬಂಧಿತ ಆರೋಪಿಗಳು. 

40 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಮಂದಿರವನ್ನು ಫೆ.5ರಂದು ಜೆಸಿಬಿಯಿಂದ ಕೆಡವಿ ಹಾಕಲಾಗಿದೆ ಎಂದು ಆರೋಪಿಸಲಾಗಿತ್ತು. ಪರಿಣಾಮ ಆಕ್ರೋಶಗೊಂಡ ಸ್ಥಳೀಯ ಕ್ರೈಸ್ತರು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu