-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Career in DCC Bank: ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗ: 71 ವ್ಯವಸ್ಥಾಪಕ, FDA ಸಹಿತ ವಿವಿಧ ಹುದ್ದೆ

Career in DCC Bank: ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗ: 71 ವ್ಯವಸ್ಥಾಪಕ, FDA ಸಹಿತ ವಿವಿಧ ಹುದ್ದೆ

Career in DCC Bank: ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗ: 71 ವ್ಯವಸ್ಥಾಪಕ, FDA ಸಹಿತ ವಿವಿಧ ಹುದ್ದೆ





ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಉದ್ಯೋಗಾವಕಾಶ ಒದಗಿಬಂದಿದೆ. ವಿಜಯಪುರ ಡಿಸಿಸಿ ಬ್ಯಾಂಕ್‌ನಲ್ಲಿ 71 ವ್ಯವಸ್ಥಾಪಕ, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:ಫೆಬ್ರವರಿ 15,2022


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಮಾರ್ಚ್ 5,2022



ವಿದ್ಯಾರ್ಹತೆ : ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಗುಣವಾಗಿ ಪದವಿ, ಬಿಇ, ಬಿ.ಎಸ್ಸಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.



ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.



ವೇತನ : ಹುದ್ದೆಗೆ ಅನುಗುಣವಾಗಿ ತಿಂಗಳಿಗೆ 23,500/- ರಿಂದ 88,300/-ರೂ ವರೆಗೆ ವೇತನ ನೀಡಲಾಗುವುದು.



ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.



ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.


ಅರ್ಜಿ ಸಲ್ಲಿಕೆ : ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.


ಕಚೇರಿ ವಿಳಾಸ: 

ಸಂಚಾಲಕ ಸದಸ್ಯರು, 

ಸಿಬ್ಬಂದಿ ನೇಮಕಾತಿ ಸಮಿತಿ ಹಾಗು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, 

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ, 

ಸೋಲಾಪುರ ರಸ್ತೆ, 

ವಿಜಯಪುರ.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article