-->
CM announced relief to Covid victim journalist- ಕೋವಿಡ್ ಗೆ ಬಲಿಯಾದ ಮಂಗಳೂರು ಪತ್ರಕರ್ತನ ಕುಟುಂಬಕ್ಕೆ ಸಿಎಂ ಪರಿಹಾರ ಮಂಜೂರು

CM announced relief to Covid victim journalist- ಕೋವಿಡ್ ಗೆ ಬಲಿಯಾದ ಮಂಗಳೂರು ಪತ್ರಕರ್ತನ ಕುಟುಂಬಕ್ಕೆ ಸಿಎಂ ಪರಿಹಾರ ಮಂಜೂರು

ಕೋವಿಡ್ ಗೆ ಬಲಿಯಾದ ಮಂಗಳೂರು ಪತ್ರಕರ್ತನ ಕುಟುಂಬಕ್ಕೆ ಸಿಎಂ ಪರಿಹಾರ ಮಂಜೂರು

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಪತ್ರಕರ್ತ ಯಶವಂತ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರವನ್ನು ಮಂಜೂರು ಮಾಡಿದ್ದಾರೆ.

 

ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಎರಡು ದಶಕಗಳ ಕಾಲ ಕೆಲಸಮಾಡಿದ್ದ ಯಶವಂತ ಕೋವಿಡ್ ಗೆ ಬಲಿಯಾಗಿದ್ದರು. ಮೃತರ ಪತ್ರಕರ್ತರ  ಕುಟುಂಬ ಸಂಕಷ್ಟದಲ್ಲಿ ಇರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಸಂಘದ ಗಮನಕ್ಕೆ ತಂದಿತ್ತು.

ಜಿಲ್ಲಾ ಸಂಘದ ಮನವಿಯ ಮೇರೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಕೊಡುವಂತೆ ರಾಜ್ಯ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

 

ಸಂಘದ ಮನವಿಯನ್ನು ಪರಿಶೀಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಮಂಜೂರು ಮಾಡಿದ್ದು, ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಧನ್ಯವಾದ ಸಲ್ಲಿಸಿದೆ.


Ads on article

Advertise in articles 1

advertising articles 2

Advertise under the article