ಪರಪುರುಷನೊಂದಿಗೆ ಓಡಿಹೋದ ಪತ್ನಿ : ಮನನೊಂದು ಪತಿ ಆತ್ಮಹತ್ಯೆ

ರಾಯಚೂರು: ಪತ್ನಿ ಬೇರೆಯವನೊಂದಿಗೆ ಓಡಿಹೋಗಿರುವುದರಿಂದ ಮನನೊಂದ ಪತಿಯೋರ್ವನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುರಗುಂಟಾದಲ್ಲಿ ನಡೆದಿದೆ. 

ಗಿರಿಧರ (42) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಪತಿ. ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರಿಧರ ಅವರ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಳು. ಇದರಿಂದ ತೀವ್ರವಾಗಿ ಮನನೊಂದಿದ್ದ ಅವರು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಓಡಿಹೋಗಿರುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.