-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
RBI Recruitment 2022 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 950 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

RBI Recruitment 2022 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 950 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

RBI Recruitment 2022 : 950 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ


ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು RBIನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ನೋಡಬಹುದು.






ಭಾರತದ ವಿವಿಧೆಡೆಯಲ್ಲಿ ಇರುವ ಆರ್‌ಬಿಐನ ಶಾಖೆಗಳಲ್ಲಿ ಪೂರ್ಣಕಾಲಿಕ ನೆಲೆಯಲ್ಲಿ ಕೆಲಸ ಮಾಡಲು ಸಿದ್ಧರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.


ಅರ್ಜಿ ಸಲ್ಲಿಸಲು ಆರಂಭದ ದಿನ : ಫೆಬ್ರವರಿ 17,2022


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ: ಮಾರ್ಚ್ 8,2022



ಶೈಕ್ಷಣಿಕ ವಿದ್ಯಾರ್ಹತೆ :

ಸಹಾಯಕ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ (ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ) ಪಡೆದಿರಬೇಕು


ಜೊತೆಗೆ ಅಭ್ಯರ್ಥಿಗಳು ಆಯ್ಕೆ ಬಯಸುವ ಪ್ರದೇಶದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.


ವಯೋಮಿತಿ :

RBI ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.



ವೇತನದ ವಿವರ : ಮಾಸಿಕ ರೂ. 14,650/- ರಿಂದ 34,990/- ವೇತನ ಜೊತೆಗೆ ಇತರೆ ಭತ್ಯೆಗಳು.


ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ / ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ.

ಪ್ರಿಲಿಮಿನರಿ ಪರೀಕ್ಷೆ ಮಾರ್ಚ್ 26 ಮತ್ತು 27, 2022ರಂದು ನಡೆಯಲಿದೆ.



ಅರ್ಜಿ ಶುಲ್ಕ : ಅರ್ಜಿ ಶುಲ್ಕದ ವಿವರವನ್ನು ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾಗಿದೆ.



ಅರ್ಜಿ ಸಲ್ಲಿಕೆ : ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬಹುದು.



ನೇಮಕಾತಿ ಕುರಿತ ಅಧಿಸೂಚನೆ ಓದಲು ಇಲ್ಲಿದೆ ಕೊಂಡಿ...

https://www.rbi.org.in/

Ads on article

Advertise in articles 1

advertising articles 2

Advertise under the article