-->
ದೇಶದ ಕಿರಿಯ ಶಾಸಕ- ಕಿರಿಯ ಮೇಯರ್ ಮದುವೆಗೆ ಕೇರಳ ಸಾಕ್ಷಿ

ದೇಶದ ಕಿರಿಯ ಶಾಸಕ- ಕಿರಿಯ ಮೇಯರ್ ಮದುವೆಗೆ ಕೇರಳ ಸಾಕ್ಷಿ

ಕೊಯಿಕ್ಕೋಡ್​: ದೇಶದ ಅತಿ ಕಿರಿಯ ಮೇಯರ್​ ಹಾಗೂ ಅತಿ ಕಿರಿಯ ಶಾಸಕ ಪರಸ್ಪರ ಮದುವೆ ಸಂಭ್ರಮದಲ್ಲಿದ್ದಾರೆ. ಈ ವಿನೂತನ ಮದುವೆಗೆ ದೇವರ ನಾಡು ಕೇರಳ ರಾಜ್ಯ ಸಾಕ್ಷಿಯಾಗಲಿದೆ. 

ತಿರುವನಂತಪುರದ ಮೇಯರ್​ ಆರ್ಯಾ ರಾಜೇಂದ್ರನ್ (21) ಹಾಗೂ ಬಲುಸ್ಸೆರಿ ಕ್ಷೇತ್ರದ ಶಾಸಕ ಕೆ.ಎಂ. ಸಚಿನ್​ (28) ವಿವಾಹವಾಗುತ್ತಿರುವ ಜೋಡಿ. 

ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಭಾರತೀಯ ಮಕ್ಕಳ ಸಂಘಟನೆಯ ವಿಭಾಗದ ಬಾಲಸಂಗಮದಿಂದಲೂ ಇಬ್ಬರು ಪರಸ್ಪರ ಪರಿಚಿತರಾಗಿದ್ದಾರೆ. ಮುಂದಿನ ಕೆಲವೇ ತಿಂಗಳಲ್ಲಿ ಇವರಿಬ್ಬರೂ ಮದುವೆಯಾಗಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಾಸಕ ಸಚಿನ್​ ತಂದೆ ಕೆ.ಎಂ. ನಂದಕುಮಾರ್​, ಇನ್ನು ಮದುವೆ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಎರಡು ಕುಟುಂಬಗಳು ಮದುವೆಗೆ ಒಪ್ಪಿಗೆ ನೀಡಿವೆ ಎಂದಿದ್ದಾರೆ. 

ಕೆ.ಎಂ. ಸಚಿನ್​ ಕೇರಳ ವಿಧಾನಸಭೆಯ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನೊಂದೆಡೆ ವಧು ಆರ್ಯಾ ರಾಜೇಂದ್ರನ್ ದೇಶದ ಕಿರಿಯ ಮೇಯರ್​ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಎಸ್​ಎಫ್​ಐ ಸಂಘಟನೆಯ ಅಖಿಲ ಭಾರತೀಯ ಜಂಟಿ ಕಾರ್ಯದರ್ಶಿಯಾಗಿರುವ ಶಾಸಕ ಸಚಿನ್​ ಕೊಯಿಕ್ಕೋಡ್​ನ ನೆಲ್ಲಿಕೋಡ್​ ಮೂಲದವರು. ಎಸ್​ಎಫ್​ಐನ ರಾಜ್ಯ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ಬಲುಸ್ಸೆರಿ ವಿಧಾನಸಭಾ ಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದರು.​ ಅವರು ಕೊಯಿಕ್ಕೂಡ್​ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂಗ್ಲಿಷ್​ ಸಾಹಿತ್ಯದಲ್ಲಿ ಪದವಿ ಹಾಗೂ ಕೊಯಿಕ್ಕೋಡ್​ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದಿದ್ದಾರೆ. 

ಆರ್ಯಾ ರಾಜೇಂದ್ರನ್​ ತಮ್ಮ 21ನೇ ವಯಸ್ಸಿನಲ್ಲೇ ತಿರುವನಂತಪುರದ ಆಲ್ ಸೇಂಟ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವಾಗಲೇ ತಿರುವನಂತಪುರದ ಮೇಯರ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇಬ್ಬರ ಮದುವೆ ಫಿಕ್ಸ್​ ಆಗಿದ್ದು, ವಿನೂತನ ಮದುವೆಗೆ ಕೇರಳ ರಾಜ್ಯ ಸಾಕ್ಷಿಯಾಗಲಿದೆ. 

Ads on article

Advertise in articles 1

advertising articles 2

Advertise under the article