-->

Valentines Day opposed- ಫೆಬ್ರವರಿ 14: ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ

Valentines Day opposed- ಫೆಬ್ರವರಿ 14: ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ

ಫೆಬ್ರವರಿ 14: ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ





ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ. ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ತಿಳಿಸಿದ್ದಾರೆ.



ಮಂಗಳೂರು ನಗರದ ಎಲ್ಲಾ ಮಾರಾಟ ಮಳಿಗೆಗಳು ಪ್ರೇಮಿಗಳ ದಿನಾಚರಣೆಗೆ ಪ್ರೇರೇಪಿಸಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.



ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ ಅಲ್ಲದೆ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ ಎಂದು ಪುನೀತ್ ವಿಷಾದ ವ್ಯಕ್ತಪಡಿಸಿದ್ದಾರೆ.



ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ. ನಮ್ಮ ಭವ್ಯ ಸಂಸ್ಕೃತಿ ಮತ್ತು ಆಚರಣೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ. 



ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್, ಸೆಕ್ಸ್ ಜಿಹಾದ್ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article