-->
ಅವಹೇಳನಕಾರಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ: ವೃದ್ಧೆ ಸೇರಿದಂತೆ ಮೂವರಿಗೆ ಗಾಯ

ಅವಹೇಳನಕಾರಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ: ವೃದ್ಧೆ ಸೇರಿದಂತೆ ಮೂವರಿಗೆ ಗಾಯ

ದಾವಣಗೆರೆ: ವಾಟ್ಸ್ ಆ್ಯಪ್ ಸ್ಟೇಟಸ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದಿರುವ ಮಾರಾಮಾರಿಯಲ್ಲಿ ಮೂವರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

ವಾಟ್ಸ್ಆ್ಯಪ್ ಸ್ಟೇಟಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ವಾಗ್ವಾದವೊಂದು ನಡೆದಿದೆ. ಈ ರೀತಿಯಲ್ಲಿ ವಾಗ್ವಾದ ನಡೆಸಿದ  ಗುಂಪೊಂದು ಮನೆಯೊಂದಕ್ಕೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ವೃದ್ಧೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಆ ಬಳಿಕ ಎರಡು ಕೋಮಿನ ಮುಖಂಡರೊಂದಿಗೆ ಪೊಲೀಸರು ಸಭೆ ನಡೆಸಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay RS 100

  

Advertise under the article