ಹಿಜಾಬ್ ತೀರ್ಪು ಪ್ರಕಟ: ನಾಳೆ ದ.ಕ.ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ; ಡಿಸಿ ಆದೇಶ

ಮಂಗಳೂರು: ಹಿಜಾಬ್ ವಿವಾದದ ತೀರ್ಪನ್ನು ‌ಹೈಕೋರ್ಟ್ ಪ್ರಕಟಿಸುವ ಹಿನ್ನೆಲೆಯಲ್ಲಿ ನಾಳೆ ದ.ಕ‌.ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಅಲ್ಲದೆ ಜಿಲ್ಲೆಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ಈಗಾಗಲೇ ‌ನಿಗದಿಯಾಗಿರುವ ಪರೀಕ್ಷೆಗಳು ಮಾತ್ರ ನಡೆಯಲು ಯಾವುದೇ ಅಡ್ಡಿಯಿಲ್ಲ‌. ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ನಾಳೆ ನಡೆಯಲಿರುವ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ ಆಯೋಜನೆ ಮಾಡಿರುವ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ನಿಗದಿಯಾಗಿದ್ದಂತೆ ನಿರಾತಂಕವಾಗಿ ನಡೆಯಲಿದೆ ಎಂದು ಡಿಸಿ ಆದೇಶಿಸಿದ್ದಾರೆ.