-->
ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ

ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ

ಕನಕಗಿರಿ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೊರಟಿದ್ದ ಟ್ರ್ಯಾಕ್ಟರೊಂದು ಕನಕಗಿರಿಯ ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. 

ಕಾರಟಗಿ ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ಯಮನೂರಪ್ಪ (55) ಮತ್ತು ಅಂಬಮ್ಮ (50) ಸ್ಥಳದಲ್ಲೇ ಮೃತಪಟ್ಟಿದ್ದರೆ, ದ್ಯಾವಮ್ಮ (60) ಹಾಗೂ ಶೇಷಪ್ಪ ಬಂಡಿ (40) ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್ ನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಕುಟುಂಬವೊಂದು ಹೊರಟಿತ್ತು. ಆದರೆ ಟ್ರ್ಯಾಕ್ಟರ್ ಇದ್ದಕ್ಕಿದ್ದಂತೆ ಪಲ್ಟಿಯಾಗಿದೆ ಪರಿಣಾಮ ಸ್ಥಳದಲ್ಲೇ ಇಬ್ಬರು ಹಾಗೂ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಅಲ್ಲದೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಇವರು ಕಾರಟಗಿಯಿಂದ ಕನಕಗಿರಿಗೆ ಟ್ರ್ಯಾಕ್ಟರ್‌ನಲ್ಲಿ ಹೊರಟಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಅವರ ಪುತ್ರ ಮೌನೇಶ ದಡೇಸೂಗೂರು ತಮ್ಮ ವಾಹನದಲ್ಲಿಯೇ ಗಾಯಾಳುಗಳನ್ನು ಸಮೀಪದ ಕಾರಟಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಖುದ್ದು ಅವರೇ ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ನಾಲ್ಕು ಜನ ಮೃತಪಟ್ಟ ಸಂಬಂದಿಕರಿಗೆ ಸಾಂತ್ವನ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article