-->

Election result reaction- ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್: ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು

Election result reaction- ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್: ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು

ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್: ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು






ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಅವಲೋಕಿಸಿದಾಗ ಕಾಂಗ್ರೆಸ್ ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳುತ್ತಿದೆ ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



ಫಲಿತಾಂಶದ ಕುರಿತು ಮಾತನಾಡಿದ ಅವರು, ದೇಶದ ಜನ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಈ ದೇಶದ ಭದ್ರತೆ, ಅಭಿವೃದ್ಧಿ, ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ ಎಂದು, ಇದಕ್ಕೆ ಉತ್ತರ ಪ್ರದೇಶ ಚುನಾವಣೆ ಫಲಿತಾಂಶ ಉತ್ತಮ ಉದಾಹರಣೆ ಎಂದು ಅವರು ಹೇಳಿದ್ದಾರೆ.



ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿಯೂ ನಮ್ಮ ರಾಜ್ಯದಲ್ಲಿ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ರವರು ಕೋವಿಡ್ ನ ಸಂಧಿಗ್ದ ಸಮಯದಲ್ಲೂ ಜನರಿಗೆ ನೀಡಿದ ಜನಪರ ಯೋಜನೆಗಳು, ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ಆಡಳಿತದ ಕಾರ್ಯವೈಖರಿಯಿಂದ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅವರು ಭವಿಷ್ಯ ನುಡಿದರು.



ಇದೇ ವೇಳೆ, ತನ್ನ ನೆಲೆಯನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಬಿಜೆಪಿ ಕಡೆ ಮುಖ ಮಾಡುತ್ತಿರುವುದು ಕಾಂಗ್ರೆಸ್ ನ ಅವನತಿಗೆ ದಾರಿಯಗಲಿದೆ. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article