-->
Karavali College - ಕರಾವಳಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತದ ವಿರುದ್ದ ಕ್ರಮಕ್ಕೆ ಒತ್ತಾಯ

Karavali College - ಕರಾವಳಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತದ ವಿರುದ್ದ ಕ್ರಮಕ್ಕೆ ಒತ್ತಾಯ

ಕರಾವಳಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತದ ವಿರುದ್ದ ಕ್ರಮಕ್ಕೆ ಒತ್ತಾಯ


ಮಂಗಳೂರು ನಗರದ ಕರಾವಳಿ ಕಾಲೇಜು ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ ರಾಜ್ಯದ ಎಲ್ಲೆಡೆ ಭಾರೀ ಸುದ್ದಿಗೆ ಗ್ರಾಸವಾಗಿದೆ.





ಹಣ ದೋಚುವ, ಸರಿಯಾಗಿ ಶಿಕ್ಷಣದ ವ್ಯವಸ್ಥೆ ಇಲ್ಲದ ಕರಾವಳಿ ಕಾಲೇಜಿನ ಅವ್ಯವಸ್ಥೆಯೇ ತನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿವೆ.



ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ SFI ಜಿಲ್ಲಾಧಿಕಾರಿ ಮತ್ತು ಮಂಗಳೂರು ನಗರ ಪೋಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.







ಕರಾವಳಿ ಕಾಲೇಜು ಸೇರಿದಂತೆ ಬಹುತೇಕ ಖಾಸಗೀ ಶಿಕ್ಷಣ ಸಂಸ್ಥೆಗಳು ಸರಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ದುಬಾರಿ ಶುಲ್ಕವನ್ನು ವಸೂಲಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸುಲಿಗೆ ನಡೆಸುತ್ತಿವೆ. ಈ ರೀತಿ ಶುಲ್ಕದ ಹೆಸರಿನಲ್ಲಿ ಸುಲಿಗೆ, ಸರಿಯಾದ ಸಂಖ್ಯೆಯ ಶಿಕ್ಷಕರನ್ನು ನೇಮಿಸದೆ ಇರುವ ಶಿಕ್ಷಕರಿಗೆ ತಿಂಗಳ ವೇತನವನ್ನೂ ನೀಡದೆ ಸತಾಯಿಸುವುದು, ಕೊಠಡಿಗಳ ಕೊರತೆ ಹೀಗೆ ಮೊದಲಾದ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿಸುತ್ತಿವೆ ಎಂದು ಮನವಿಯಲ್ಲಿ ದೂರಲಾಗಿದೆ.



ಇಂತಹ ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮತ್ತು ಅವರ ಭವಿಷ್ಯಕ್ಕೆ ತೊಡಕಾಗುತ್ತಿವೆ. ಕಾಲೇಜಿನ ಅವ್ಯವಸ್ಥೆ, ಹಣದಾಹಿ ಆಡಳಿತ ಹಾಗೂ ಇತರ ಗಂಭೀರ ಸಮಸ್ಯೆಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಕುಗ್ಗಿಸುತ್ತದೆ. ಕೆಲ ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಯಂತಹ ಕೃತ್ಯಕ್ಕೆ ಮುಂದಾಗುತ್ತಾರೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.



ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಂಗಳೂರಿನ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಶೈಕ್ಷಣಿಕ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಲಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article