-->

ವೈದ್ಯೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ ಆರೋಪ: ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಪ್ರತಿಭಟನೆ

ವೈದ್ಯೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ ಆರೋಪ: ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ವೈದ್ಯೆಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿರುವುದಾಗಿ ‌ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಧರಣಿ ನಡೆಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಗ್ರಾಮದ ನಿವಾಸಿ ಸವಿತಾ (22) ಮೃತಪಟ್ಟ ಬಾಣಂತಿ. 

ಮಾರ್ಚ್ 10ರಂದು ಬೆಳಗ್ಗೆ 9 ಗಂಟೆಗೆ ಸವಿತಾರನ್ನು ಹೆರಿಗೆಗೆಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅರ್ಚನಾ ಎಂಬ ವೈದ್ಯೆ ಸವಿತಾಗೆ ಸಹಜ ಹೆರಿಗೆ ಮಾಡಿಸಿದ್ದಾರೆ. ಆದರೆ ಹೆರಿಗೆಯ ಬಳಿಕ ಬಾಣಂತಿಗೆ ರಕ್ತ ಸ್ರಾವ ಹೆಚ್ಚಾಗಿದೆ. ಅದಕ್ಕಾಗಿ ಬೇರೆ ಕಡೆಯಿಂದ ರಕ್ತ ತರುವಂತೆ ಸೂಚಿಸಿದ್ದಾರೆ. ಆ ಬಳಿಕ ಆಕೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಗಿದೆ. 

ಅಲ್ಲದೆ ಮಧ್ಯಾಹ್ನ 2 ಗಂಟೆಯ ಬಳಿಕ ಮಗು ಮತ್ತು ತಾಯಿಯನ್ನು ಆಸ್ಪತ್ರೆಯಿಂದ ಹೊರಗೆ ಕಳಿಸಲಾಗಿದೆ. ಹೆರಿಗೆಯ ಬಳಿಕ ತಾಯಿ-ಮಗು ಚೆನ್ನಾಗಿದ್ದಾರೆ ಎಂದು ತಿಳಿಸಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರೊಚ್ಚಿಗೆದ್ದ ಮೃತ ಬಾಣಂತಿಯ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article