-->
1000938341
ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ ಅರ್ಚಕನಿಗೆ 1 ವರ್ಷ ಕಾರಾಗೃಹ ಶಿಕ್ಷೆ, 5 ಸಾವಿರ ರೂ. ದಂಡ‌

ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ ಅರ್ಚಕನಿಗೆ 1 ವರ್ಷ ಕಾರಾಗೃಹ ಶಿಕ್ಷೆ, 5 ಸಾವಿರ ರೂ. ದಂಡ‌

ಬೆಂಗಳೂರು: ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅರ್ಚಕನೋರ್ವನಿಗೆ ಎಫ್‌ಟಿಎಸ್‌ಸಿ ಒಂದನೇ ನ್ಯಾಯಾಲಯ 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಚಂದ್ರಾಲೇಔಟ್‌ ನಿವಾಸಿ ಸುಧೀಂದ್ರ ಶಿಕ್ಷೆಗೊಳಗಾದ ಅಪರಾಧಿ. 

ಕೆಲ ವರ್ಷಗಳ ಹಿಂದೆ ಸುಧೀಂದ್ರ ಆತನ ಮನೆಯ ಪಕ್ಕದಲ್ಲಿದ್ದ ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತನೆ ಮಾಡಿ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ್ದ. ಈ ಬಗ್ಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಾಲೇಔಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿ ತನಿಖೆ ನಡೆಸಿದ್ದರು. ಈ ಬಗ್ಗೆ ಸುಧೀಂದ್ರನ ವಿರುದ್ಧ ಎಫ್‌ಟಿಎಸ್‌ಸಿ ಒಂದನೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ವಾದ - ವಿವಾದಗಳನ್ನು ಆಲಿಸಿ ಆರೋಪಿ  ಸುಧೀಂದ್ರನನ್ನು ತಪ್ಪಿತಸ್ಥನೆಂದು ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಜತೆಗೆ ನೊಂದ ಬಾಲಕಿಯರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. 

Ads on article

Advertise in articles 1

advertising articles 2

Advertise under the article