ಕಾಂಚಿಪುರಂ(ತಮಿಳುನಾಡು): ಕಾಲೇಜು ವಿದ್ಯಾರ್ಥಿನಿಯರ ಗುಂಪೊಂದು ತರಗತಿಯೊಳಗಡೆಯೇ ಕಂಠಪೂರ್ತಿ ಮದ್ಯಪಾನ ಮಾಡಿರುವ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ. ಇದರ ವೀಡಿಯೋ ವೈರಲ್ ಆಗಿತ್ತು.
ಕಾಂಚಿಪುರಂನ ಎನತ್ತೂರ್ನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ವೀಡಿಯೋದಲ್ಲಿ ಕಾಣಿಸಿಕೊಂಡ ಪ್ರಕಾರ, ಒಟ್ಟು 10 ವಿದ್ಯಾರ್ಥಿನಿಯರು ತರಗತಿಯಲ್ಲಿದ್ದರು. ಇವರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಮದ್ಯ ಸೇವನೆ ಮಾಡಿದ್ದಾರೆ. ಉಳಿದವರು ಅವರಿಗೆ ಸಹಾಯ ಮಾಡಿದ್ದಾರೆ. ಇವರು ಕೂಲ್ ಡ್ರಿಂಕ್ಸ್ ಬಾಟಲಿಯಲ್ಲಿ ಮದ್ಯ ಬೆರೆಸಿ, ಸೇವನೆ ಮಾಡಿದ್ದಾರೆ. ಘಟನೆಯ ಬಗ್ಗೆ ಶಾಲಾ ಆಡಳಿತ ಮಂಡಳಿ ಗಮನಕ್ಕೆ ಬರುತ್ತಿದ್ದಂತೆ ಪೋಷಕರ ಗಮನಕ್ಕೆ ತರಲಾಗಿದೆ. ಜೊತೆಗೆ, ವಿದ್ಯಾರ್ಥಿನಿಯರಿಗೆ ವೈದ್ಯಕೀಯ ಸಮಾಲೋಚನೆ ನಡೆಸುವಂತೆಯೂ ಸೂಚನೆ ನೀಡಲಾಗಿದೆ.
ಕಳೆದ ತಿಂಗಳು ತಮಿಳುನಾಡಿನ ಸರ್ಕಾರಿ ಬಸ್ವೊಂದರಲ್ಲೇ ವಿದ್ಯಾರ್ಥಿನಿಯರು ಮದ್ಯ ಸೇವನೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ತಿರುಕಝಕುಂದ್ರಂನಿಂದ ಠಾಚೂರ್ಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿಯರ ಗುಂಪು ಮದ್ಯಪಾನ ಮಾಡಿದ್ದರು.