ಮಂಗಳೂರು ಏರ್ಪೋಟ್ ನಲ್ಲಿ ಬುರ್ಕಾದ ಬಟನ್ ಒಳಗಡೆ ಬಚ್ಚಿಟ್ಟು 100 ಗ್ರಾಂ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ವಶಕ್ಕೆ

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ
ಬುರ್ಕಾದ ಬಟನ್​ನೊಳಗೆ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು  ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

ದುಬೈನಿಂದ ಮಂಗಳೂರಿಗೆ ನಿನ್ನೆ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಆತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.


ಅನುಮಾನದ ಮೇರೆಗೆ ಈ ಪ್ರಯಾಣಿಕನಲ್ಲಿದ್ದ ಬುರ್ಕಾವನ್ನು ತಪಾಸಣೆ ಮಾಡಿದಾಗ, ಅದರ ಬಟನ್​​ನೊಳಗಡೆ ಉಂಗುರದಾಕಾರದಲ್ಲಿ ಚಿನ್ನವನ್ನು ಅಡಗಿಸಿಡಲಾಗಿತ್ತು. ಈತ ಬಳಿಯಿಂದ ಕಸ್ಟಮ್ಸ್ ಅಧಿಕಾರಿಗಳು 5,34,000 ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನ ಸಹಿತ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.