
2ವರ್ಷದ ಹಸುಳೆಯ ಮೇಲೆ ಅತ್ಯಾಚಾರಗೈದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು
4/10/2022 06:08:00 AM
ಆನೇಕಲ್: 2ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ ಪೊಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಆನೇಕಲ್ ತಾಲೂಕು ಅತ್ತಿಬೆಲೆ ಸಮೀಪದ ನೆರಳೂರು ಮೂಲದ ದೀಪು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ.
ಆರೋಪಿ ದೀಪು ಕಳೆದ ತಿಂಗಳ 20ರಂದು ತನ್ನ ಕಾರಿನಲ್ಲಿ ಅತ್ತಿಬೆಲೆಗೆ 2 ವರ್ಷದ ಮಗುವನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದ ಎಂದು ಹೇಳಲಾಗಿದೆ. ಇದರಿಂದ ಮಗು ಅಸ್ವಸ್ಥಗೊಂಡು ಮೃತಪಟ್ಟಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಅತ್ತಿಬೆಲೆ ಪೊಲೀಸರು ಮಗುವಿನ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿ ದೀಪುನನ್ನು ಬಂಧಿಸಿದ್ದರು. ಇದೀಗ, ಆರೋಪಿ ದೀಪು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.