-->
ಮಂಗಳೂರು: ಲಾರಿ ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಲಾರಿ ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಲಾರಿಯೊಂದು ಅಪಘಾತಗೊಂಡ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ‌ಮೃತಪಟ್ಟ ಘಟನೆ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಕೊಣಾಜೆ ನಿವಾಸಿ ರೊನಾಲ್ಡ್ (59) ಎಂಬವರು ಮೃತಪಟ್ಟ ಸ್ಕೂಟರ್ ಸವಾರ. 

ರೊನಾಲ್ಡ್ ಅವರು ಕಾರ್ಯ ನಿಮಿತ್ತ ನಗರಕ್ಕೆ ಬಂದಿದ್ದರು‌. ಆ ಬಳಿಕ ಮತ್ತೆ ಅವರು ತಮ್ಮ ಮನೆಗೆ ಮರಳುತ್ತಿದ್ದರು. ಈ ಸಂದರ್ಭ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದ ಲಾರಿಯೊಂದು ಸ್ಕೂಟರ್‌ನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ರೊನಾಲ್ಡ್ ಅವರು ಲಾರಿಯಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಈ ಲಾರಿಯು ಮೊದಲಿಗೆ ಕಾರೊಂದಕ್ಕೆ ಢಿಕ್ಕಿ ಹೊಡೆದಿದೆ. ಆ ಬಳಿಕ ರೊನಾಲ್ಡ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಇದೇ ದಾರಿಯಾಗಿ ಸಾಗುತ್ತಿದ್ದ ಶಾಸಕ ಯು.ಟಿ.ಖಾದರ್ ಅವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100