-->
ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಹೆಡ್ ಮಾಸ್ಟರ್ ಅಮಾನತು!

ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಹೆಡ್ ಮಾಸ್ಟರ್ ಅಮಾನತು!

ಛತ್ತೀಸ್‌ಗಢ: ಛತ್ತೀಸ್‌ಗಢದ ಕಂಕೇರ್‌ನ ಸರಕಾರಿ ಪ್ರೌಢಶಾಲೆಯೊಂದರ ಹೆಡ್ ಮಾಸ್ಟರ್ ಓರ್ವನು ಶಾಲೆಯಲ್ಲೇ ಶಿಕ್ಷಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದಿದ್ದಾನೆ. ಇದೀಗ ಆತ ಅಮಾನತುಗೊಂಡಿದ್ದಾನೆ. ಗ್ರಾಮದ ಕೆಲವರು ಕುಟುಕು ಕಾರ್ಯಾಚರಣೆ ನಡೆಸಿ ಶಿಕ್ಷಕನ ಕಾಮಚೇಷ್ಟೆಯನ್ನು ವೀಡಿಯೋ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಶಾಲೆಯಲ್ಲಿ ಹೆಡ್ ಮಾಸ್ಟರ್ ಹಾಗೂ ಶಿಕ್ಷಕಿಯೊಂದಿಗೆ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಈ ಹಿಂದೆಯೇ ಕೆಲ ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಅವರೇ ವೀಡಿಯೋ ಸೆರೆ ಹಿಡಿದು ಕೃತ್ಯವನ್ನು ಬಯಲು ಮಾಡಿದ್ದಾರೆ. ವೀಡಿಯೋದಲ್ಲಿರುವ ಆಪಾದಿತ ಹೆಡ್ ಮಾಸ್ಟರ್ ಅಪರಿಚಿತ ವ್ಯಕ್ತಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡದಂತೆ ಲಂಚ ನೀಡುತ್ತಿದ್ದ. ಈ ಸಂದರ್ಭದ ದೃಶ್ಯವನ್ನು ವೀಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಈ ಘಟನೆಯ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿ ಚಂದನ್‌ಕುಮಾರ್‌ಗೆ ದೂರು ನೀಡಿದ್ದರು. ಶಾಲೆಯ ಆಡಳಿತ ಮಂಡಳಿಯೂ ಪ್ರಕರಣ ಕುರಿತು ವಿಚಾರಣೆ ನಡೆಸಿದೆ. ಇದೀಗ ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಹೆಡ್ ಮಾಸ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಕೂಡ ಶಿಕ್ಷಕನಿಗೆ ಹಲವಾರು ಬಾರಿ ಎಚ್ಚರಿಕೆ ನೀಡಲಾಗಿತ್ತು.

 ಕೋವಿಡ್ ಅವಧಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿ ತರಗತಿಗಳು ನಡೆಯದಿದ್ದಾಗ ಮಹಿಳಾ ಸಿಬ್ಬಂದಿ ಮತ್ತು ಪ್ರಾಂಶುಪಾಲರ ಮಧ್ಯೆ ಅನೈತಿಕ ಸಂಬಂಧ ಬೆಳೆದಿತ್ತು ಎಂದು ಗ್ರಾಮಸ್ಥರು ದೂರಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100