-->
ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮ್ಯಾನೇಜರ್ ಅಂದರ್

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮ್ಯಾನೇಜರ್ ಅಂದರ್

ಮೈಸೂರು: ಇಲ್ಲಿನ ಪ್ರತಿಷ್ಠಿತ ಗುರುಕುಲ ಹಾಸ್ಟೆಲ್ ನ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದ ಮೇಲೆ ಮ್ಯಾನೇಜರ್ ಗಿರೀಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿ ಗಿರೀಶ್ ಈ ಗುರುಕುಲದಲ್ಲಿ 15 ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಇದೀಗ ಆತ ಹಾಸ್ಟೆಲ್‌ನ ಇಬ್ಬರು ಹೆಣ್ಣು ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗುರುಕುಲ ಹಾಸ್ಟೆಲ್​ನಲ್ಲಿ ಸದ್ಯ 17 ವಿದ್ಯಾರ್ಥಿನಿಯರಿದ್ದಾರೆ. ಈ ಪೈಕಿ ಇಬ್ಬರ ಮೇಲೆ ಆರೋಪಿ ಗಿರೀಶ್ ಲೈಂಗಿಕ​ ದೌರ್ಜನ್ಯೆಸಗುತ್ತಿದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಸಹ ಶಿಕ್ಷಕರೊಬ್ಬರು ದೂರು ನೀಡಿದ್ದಾರೆ.

ಈ ಬಗ್ಗೆ ಗಿರೀಶ್ ವಿರುದ್ಧ ಹೆಬ್ಬಾಳ ಠಾಣೆಗೆ ಸಮಿತಿ ದೂರು ನೀಡಿದೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article

IMG-20220907-WA0033 IMG_20220827_133242