-->
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವಾಕೆಯ ಮೇಲೆರಗಿದ ಕಾಮುಕರು: ಪ್ರಿಯಕರ ಸೇರಿದಂತೆ ನಾಲ್ವರು ಅಂದರ್

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವಾಕೆಯ ಮೇಲೆರಗಿದ ಕಾಮುಕರು: ಪ್ರಿಯಕರ ಸೇರಿದಂತೆ ನಾಲ್ವರು ಅಂದರ್

ಚಿಕ್ಕಬಳ್ಳಾಪುರ: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲೆಂದು ಬಂದಿದ್ದ ಬಾಲಕಿಯ ಮೇಲೆ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪದ ಮೇಲೆ ಪ್ರಿಯಕರ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿಯಲ್ಲಿ ನಡೆದಿದೆ.

ಸೋಮವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ತನ್ನ ಪ್ರಿಯಕರ ನಾರಾಯಣಸ್ವಾಮಿಯೊಂದಿಗೆ ಪಾತಬಾಗೇಪಲ್ಲಿ ಬಳಿಯ ನಿರ್ಜನ ಪ್ರದೇಶಕ್ಕೆ ತೆರಳಿದ್ದಾಳೆ. ಈ ವೇಳೆ ಬಾಲಕಿಯ ಪ್ರಿಯಕರನ ಸ್ನೇಹಿತ ಅಲ್ಲಿಗೆ ಬಂದಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಇನ್ನಿಬ್ಬರಾದ ನಾಗರಾಜು, ಸುರೇಶ್ ಜೊತೆ ಸೇರಿ ಇವರಿಬ್ಬರ ಖಾಸಗಿ ವೀಡಿಯೋವನ್ನು ಸೆರೆ ಹಿಡಿದಿದ್ದಾರೆ. ಬಳಿಕ ಅದನ್ನು ಅವರಿಗೆ ತೋರಿಸಿ ಬಾಲಕಿ ತಮಗೂ ಸಹಕರಿಸುವಂತೆ ಬೇಡಿಕೆ ಇಟ್ಟಿದ್ದಾರೆ. 

ಈ ವೇಳೆ ಬಾಲಕಿ ಹಾಗೂ ಆಕೆಯ ಪ್ರಿಯಕರ ನಾರಾಯಣಸ್ವಾಮಿ ವಿರೋಧಿಸಿದ್ದಾರೆ. ಈ ವೇಳೆ ಒತ್ತಾಯಪೂರ್ವಕವಾಗಿ ಆರೋಪಿಗಳು ಬಾಲಕಿಯ ಮೇಲೆರಗಿದ್ದಾರೆ. ಅಲ್ಲಿಂದ ಓಡಿ ಹೋದ ನಾರಾಯಣಸ್ವಾಮಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ನಿರ್ಜನ ಪ್ರದೇಶಕ್ಕೆ ಬಂದ ಜನರು ಮೂವರು, ಕಾಮುಕರನ್ನು ಹಿಡಿದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಪ್ರಿಯಕರ ನಾರಾಯಣಸ್ವಾಮಿ ಸೇರಿದಂತೆ ಮೂವರು ಆರೋಪಿಗಳನ್ನು ಬಾಗೇಪಲ್ಲಿ ಪೊಲೀಸರು ವಶಕ್ಕೆ ಪಡೆದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಬಾಲಕಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲಮಂದಿರದಲ್ಲಿ ರಕ್ಷಣೆ ನೀಡಲಾಗಿದೆ. ನಾರಾಯಣಸ್ವಾಮಿ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಮೂವರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಚಿಕ್ಕಬಳ್ಳಾಪುರ ನಗರ ಠಾಣೆಗೆ ಕರೆತರಲಾಗಿದೆ. 2 ವರ್ಷಗಳಿಂದ ಬಾಲಕಿ ಹಾಗೂ ನಾರಾಯಣಸ್ವಾಮಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣಳಾದ ಬಳಿಕ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಬಾಲಕಿ ಸೋಮವಾರ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಎದುರಿಸಲು ಬಾಗೇಪಲ್ಲಿಗೆ ಬಂದಿದ್ದಳು. ಪರೀಕ್ಷೆ ಮುಗಿದ ಬಳಿಕ ಪ್ರಿಯಕರನನ್ನು ಭೇಟಿ ಮಾಡಿದ್ದಳು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100